
ಪ್ರಜಾವಾಣಿ ವಾರ್ತೆ
ಬಳ್ಳಾರಿ: ‘ಜನವರಿ 1ರಂದು ಬಳ್ಳಾರಿಯಲ್ಲಿ ನಡೆದಿದ್ದ ಘರ್ಷಣೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 17ರಂದು ಎಪಿಎಂಸಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು’ ಎಂದು ವಿಧಾನ ಪರಿಷತ್ತಿನ ಮುಖ್ಯಸಚೇತಕ ಎನ್.ರವಿಕುಮಾರ್ ತಿಳಿಸಿದರು.
‘ಶಾಸಕ ಭರತ್ ರೆಡ್ಡಿ ಅವರನ್ನು ಬಂಧಿಸುವಂತೆ ಸಮಾವೇಶದಲ್ಲಿ ಆಗ್ರಹಿಸಲಾಗುವುದು. ಇದರ ಬಳಿಕ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ಹೋರಾಟದ ಭಾಗವಾಗಿ ಪಾದಯಾತ್ರೆ ಆಯೋಜಿಸುವ ಬಗ್ಗೆಯೂ ಶೀಘ್ರವೇ ನಿರ್ಧರಿಸಲಾಗುವುದು. ಇದರ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚಿಸಲಾಗುವುದು’ ಎಂದು ಶಾಸಕ ಜನಾರ್ದನ ರೆಡ್ಡಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.