ADVERTISEMENT

ಬಳ್ಳಾರಿ ಜಿಟಿಟಿಸಿ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 3:14 IST
Last Updated 21 ಅಕ್ಟೋಬರ್ 2025, 3:14 IST
   

ಬಳ್ಳಾರಿ: ಹತ್ತನೇ ತರಗತಿ ಉತ್ತೀರ್ಣರಾದ ಯುವಕರಿಗೆ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ‘ಟೂಲ್‌ರೂಮ್ ಮಶಿನಿಸ್ಟ್’ ತಾಂತ್ರಿಕ ದೀರ್ಘಾವತಿ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಂದೇ ಕೋರ್ಸ್‌ನಲ್ಲಿ ಫಿಟ್ಟರ್ ಟರ್ನರ್, ಮಿಲ್ಲರ್, ಗ್ರೈಂಡರ್‌, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡಲಾಗುತ್ತದೆ.

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. , ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ಸಿಗಲಿವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಿಕೊಡಲಾಗುತ್ತದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು.

ADVERTISEMENT

ಮೆಕ್ಯಾನಿಕಲ್, ಎಲೆಕ್ಟ್ರಾನಿಕ್‌, ಎಲೆಕ್ಟ್ರಿಕಲ್‌ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡಿಸೆಂಬರ್ ಮಾಹೆಯಿಂದ ಇಂಟರ್ನ್‌ಶಿಪ್‌ ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಹೆಚ್ಚಿನ ಮಾಹಿತಿಗೆ ನಗರದ ಐ.ಟಿ.ಐ ಕ್ಯಾಂಪಸ್‌ನ ಜಿಟಿಟಿಸಿ ಕೇಂದ್ರ ಅಥವಾ ಮೊ.9972320076, 9620057086ಗೆ ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಿನ್ಸಿಪಾಲ್‌ ಮುತ್ತಣ್ಣ ದರ್ಮಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.