ADVERTISEMENT

ಬಳ್ಳಾರಿ ಮಹಾನಗರ ಪಾಲಿಕೆ: ನಿಯಮ ಉಲ್ಲಂಘನೆ; ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 2:52 IST
Last Updated 25 ಸೆಪ್ಟೆಂಬರ್ 2025, 2:52 IST
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸಾಮಾಜಿಕ ಕಾರ್ಯಕರ್ತ ಊಳೂರು ಸಿದ್ದೇಶ ಅವರು ಆಯುಕ್ತ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಿದರು
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸಾಮಾಜಿಕ ಕಾರ್ಯಕರ್ತ ಊಳೂರು ಸಿದ್ದೇಶ ಅವರು ಆಯುಕ್ತ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಿದರು   

ಬಳ್ಳಾರಿ: ಮಹಾನಗರ ಪಾಲಿಕೆ ವಲಯ–1ರ ವ್ಯಾಪ್ತಿಯ ಸ್ವತ್ತುಗಳಿಗೆ ವಲಯ–2ರಲ್ಲಿ ಕಾನೂನು ಬಾಹಿರವಾಗಿ ನಮೂನೆ–2 ‘ಎ’ ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಊಳೂರು ಸಿದ್ದೇಶ್‌ ನೇತೃತ್ವದ ನಿಯೋಗವು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು.

ಆಯುಕ್ತರನ್ನು ಬುಧವಾರ ಭೇಟಿ ಮಾಡಿ, ‘ವಲಯ 1ರ ಕಡತಗಳಿಗೆ ವಲಯ 2ರಲ್ಲಿ ಅನುಮೋದನೆ ನೀಡಲು ಸರ್ಕಾರದ ಸುತ್ತೋಲೆ ಹಾಗೂ ಆದೇಶವಿಲ್ಲ. ಅಧಿಕಾರ ದುರ್ಬಳಕೆ ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಆರೋಪಿಸಿದರು.  

‘16 ಸ್ವತ್ತಿನ ಕಡತಗಳಿಗೆ ಹೀಗೆ ಅನುಮೋದನೆ ನೀಡಲಾಗಿದ್ದು,  ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.