
ಬಳ್ಳಾರಿ: ಜಿಲ್ಲೆಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಶನಿವಾರದಿಂದ ಆರಂಭವಾಗಿದೆ. ಮೊದಲ ದಿನ ನಡೆದ ಕನ್ನಡ ಭಾಷಾ ವಿಷಯ ಪರೀಕ್ಷೆ ಯಶ್ವಸಿಯಾಗಿ ನಡೆದಿದ್ದು, ಒಟ್ಟಾರೆಯಾಗಿ 410 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಪರೀಕ್ಷೆಗೆ ಜಿಲ್ಲೆಯಲ್ಲಿ ಕನ್ನಡ ಭಾಷಾ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 10,294 ವಿದ್ಯಾರ್ಥಿಗಳ ಪೈಕಿ 9884 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 410 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಬಳ್ಳಾರಿ ನಗರ-12, ಸಿರಗುಪ್ಪ-03, ಕುರುಗೋಡು ಒಂದು ಹಾಗೂ ಸಂಡೂರು, ಕಂಪ್ಲಿ ತಲಾ ಎರಡು ಸೇರಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.