ADVERTISEMENT

ತೋರಣಗಲ್ಲು | ವಾಹನಗಳ ಸಮೇತ ಪಡಿತರ ಅಕ್ಕಿ ವಶ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 15:22 IST
Last Updated 4 ಆಗಸ್ಟ್ 2024, 15:22 IST
ಕುಡತಿನಿ ಪೊಲೀಸರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನಗಳನ್ನು ಸರಕು ಸಮೇತ ವಶಕ್ಕೆ ಪಡೆದಿದ್ದಾರೆ
ಕುಡತಿನಿ ಪೊಲೀಸರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನಗಳನ್ನು ಸರಕು ಸಮೇತ ವಶಕ್ಕೆ ಪಡೆದಿದ್ದಾರೆ   

ಕುಡತಿನಿ (ತೋರಣಗಲ್ಲು): ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ ನಿತ್ಯ ನಂದಾ ಸ್ವಾಮಿಯ ಮಠದ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯ ಸಾಗಣೆ ಮಾಡುತ್ತಿದ್ದ ಮೂರು ವಾಹನಗಳ ಮೇಲೆ ಭಾನುವಾರ ದಾಳಿ ಮಾಡಿದ ಪೊಲೀಸರು ವಾಹನಗಳ ಸಮೇತ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಪಡಿತರ ಅಕ್ಕಿಯನ್ನು ಒಂದು ಇಚಾರ್ ಲಾರಿ, ಎರಡು ಬುಲೇರೋ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಆಧರಿಸಿ ಕುಡತಿನಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಅಕ್ಕಿ, ವಾಹನಗಳನ್ನು ಜಪ್ತಿ ಮಾಡಿದ್ದಾರೆ.

₹2.35 ಲಕ್ಷ ಮೌಲ್ಯದ ಒಟ್ಟು 173 ಅಕ್ರಮ ಪಡಿತರ ಅಕ್ಕಿಯ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಚಾಲಕರು ವಾಹನಗಳನ್ನು ಸ್ಥಳದಲ್ಲೆ ಬಿಟ್ಟು ಪಾರಾರಿಯಾಗಿದ್ದರಿಂದ ಲಾರಿಗಳನ್ನು ಮಾತ್ರ ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ, ಕುರುಗೋಡು ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ನೀಡಿದ ದೂರು ಆಧರಿಸಿ ಕುಡತಿನಿ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.