
ಸಂಡೂರು: ತಾಲ್ಲೂಕಿನ ಹಳೆಮಾದಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಂಟನೇ ತರಗತಿ ಆರಂಭಿಸುವುದು, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಸಂಘಟನೆಯ ಮುಖಂಡರು, ಪೋಷಕರು ಶುಕ್ರವಾರ ಪ್ರತಿಭಟನೆ ನಡೆಸಿದರು
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ‘ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ ರಾಜ್ಯದಾದಂತ 5,900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರವು ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಉಳಿದ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಿರುವುದು ಸರಿಯಲ್ಲ. ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಯೋಜನೆ ಪ್ರಕಾರ ರಾಜ್ಯದ ಲಕ್ಷಾಂತರ ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಈರಣ್ಣ, ಜಿಲ್ಲಾ ಉಪಾಧ್ಯಕ್ಷೆ ಶಾಂತಿ, ಗ್ರಾಮದ ಮುಖಂಡರಾದ ಕೆ.ಎಸ್.. ವೆಂಕಟೇಶ್, ಸುನಿಲ್, ಶೇಕ್ಷಾವಲಿ, ವೀರೇಶ್, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.