ತೆಕ್ಕಲಕೋಟೆ: ಸಮೀಪದ ಉಪ್ಪಾರ ಹೊಸಳ್ಳಿ ಗ್ರಾಮದಲ್ಲಿ ರೈತರೊಬ್ಬರು ಹಾವು ಕಡಿತದಿಂದ ಭಾನುವಾರ ಮೃತಪಟ್ಟಿದ್ದಾರೆ.
ಎನ್. ಮಂಜುನಾಥ (33) ಮೃತರು. ಗದ್ದೆಗೆ ನೀರು ಹರಿಸಲು ತೆರಳಿದ್ದಾಗ ಹಾವು ಕಚ್ಚಿದೆ. ಪಟ್ಟಣದ ಸಮುದಾಯ ಆಸ್ಪತ್ರೆ ಹಾಗೂ ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಬಳ್ಳಾರಿಯ ವಿಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.