
ಬಳ್ಳಾರಿ: ಗುರುವಾರವಷ್ಟೇ (ಜ.1) ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು, ಕರ್ತವ್ಯ ಲೋಪದ ಆರೋಪದ ಮೇಲೆ ಶುಕ್ರವಾರ ಅಮಾನತು ಮಾಡಲಾಗಿದೆ.
ಬುಧವಾರ ರಾತ್ರಿಯಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿತ್ತು. ನೆಜ್ಜೂರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಅದೇ ದಿನ ಕಾಂಗ್ರೆಸ್, ಬಿಜೆಪಿ ನಾಯಕರ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಬಳ್ಳಾರಿ ವಲಯದ ಡಿಐಜಿಪಿ ವರ್ತಿಕಾ ಕಟಿಯಾರ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೂಚಿಸಿದ್ದರು.
‘ಪರಿಸ್ಥಿತಿ ನಿಭಾಯಿಸುವಲ್ಲಿ ಹಾಗೂ ಹಿರಿಯ ಅಧಿಕಾರಿಗಳಿಗೆ ಘಟನೆಯ ಗಂಭೀರತೆ ಬಗ್ಗೆ ಮಾಹಿತಿ ನೀಡುವಲ್ಲಿ ಎಸ್‌ಪಿ ವಿಫಲರಾಗಿದ್ದಾರೆ’ ಎಂದು ವರ್ತಿಕಾ ಕಟಿಯಾರ್ ವರದಿ ನೀಡಿದ್ದರು. ಅದನ್ನು ಆಧರಿಸಿ ಅಮಾನತು ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲಾ ಎಸ್‌ಪಿ ರಂಜಿತ್ ಕುಮಾರ್ ಭಂಡಾರಿ ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.