
ಬಳ್ಳಾರಿ: ಬಳ್ಳಾರಿಯಲ್ಲಿ ನಡೆದಿದ್ದ ಘರ್ಷಣೆ ಮತ್ತು ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು, ಭಾನುವಾರ ಘಟನಾ ಸ್ಥಳ ಪರಿಶೀಲಿಸಿದರು. ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು
ಸಿಐಡಿ ಎಸ್‌ಪಿ ಡಾ.ಹರ್ಷಾ ಪ್ರಿಯಂವದಾ ಅವರ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರೊಂದಿಗೆ ಚರ್ಚೆ ನಡೆಸಿತು. ನಾಲ್ಕೂ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು.
ಘಟನೆ ನಡೆದ ಅವ್ವಂಬಾವಿಯಲ್ಲಿ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ತೆರಳಿದ ಅಧಿಕಾರಿಗಳು ಪರಿಶೀಲಿಸಿದರು. ಬ್ರೂಸ್‌ಪೇಟೆ ಪೊಲೀಸ್ ಠಾಣೆ ಅಧಿಕಾರಿಗಳು ಸಿಐಡಿ ತಂಡಕ್ಕೆ ಮಾಹಿತಿ ಒದಗಿಸಿದರು. ತನಿಖೆ ಮತ್ತು ಇತರ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಲು ಹರ್ಷಾ ಪ್ರಿಯಂವದಾ ನಿರಾಕರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ಸಿಐಡಿ ತಂಡ ಬಳ್ಳಾರಿಗೆ ಬಂದಿದೆ. ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ತಿಳಿಸಿದರು.
Quote - ಪೊಲೀಸರು ಸಿಐಡಿ ಅಧಿಕಾರಿಗಳು ಸರ್ಕಾರದ ಕೈಗೊಂಬೆಗಳೇ. ಅವರು ಧಕ್ಷರಾಗಿದ್ದಿದ್ದರೆ ಇಷ್ಟೊತ್ತಿಗೆ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ ಬಂಧನವಾಗಬೇಕಿತ್ತು. ಸಿಬಿಐ ಅಥವಾ ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ ಜನಾರ್ದನ ರೆಡ್ಡಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.