
ಹೂವಿನಹಡಗಲಿ: ‘ಬಳ್ಳಾರಿಯಲ್ಲಿ ನಡೆದ ಗಲಭೆ, ಗೂಂಡಾಗಿರಿ ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆಯಂತಹ ಹೀನ ಕೃತ್ಯವಾಗಿದೆ’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳ ನಡೆನುಡಿ ಆದರ್ಶವಾಗಿರಬೇಕು. ಬಳ್ಳಾರಿಯ ಗೂಂಡಾಗಿರಿ ಜನಪ್ರತಿನಿಧಿಗಳನ್ನು ಅಸಹ್ಯದಿಂದ ನೋಡುವಂತೆ ಮಾಡಿದೆ. ಮಾಜಿ ಸಚಿವ, ಹಿರಿಯ ಶಾಸಕ ಜನಾರ್ದನರೆಡ್ಡಿ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದರು.
‘ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿಯ ಜೀವ ತೆಗೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಕಾಯ್ದೆ ಜಾರಿಗೆ ತಂದಿದೆ. ಇದು ವಿರೋಧ ಪಕ್ಷಗಳ ಸಾಂವಿಧಾನಿಕ ಹಕ್ಕು ಕಸಿಯುವ ಪ್ರಯತ್ನ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.