ಕೊಟ್ಟೂರು: ಪಟ್ಟಣದ ಕೌಲಪೇಟೆಯ ಬನಶಂಕರಿದೇವಿ ಕಾರ್ತಿಕೋತ್ಸವ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗಿನ ಜಾವದಿಂದಲೇ ಅರ್ಚಕ ಬಳಗ ದೇವಿಗೆ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿ ಪೂಜಾಕೈಂಕರ್ಯಗಳನ್ನು ನೆರವೇರಿಸುತ್ತಿದ್ದಂತೆ ಭಕ್ತರು ದೇವಿಯ ದರ್ಶನ ಪಡೆದರು.
ಸಂಜೆಯಾಗುತ್ತಿದ್ದಂತೆ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಸಾಲಾಗಿ ಜೋಡಿಸಿದ್ದ ಪ್ರಣತಿಗಳಲ್ಲಿ ಭಕ್ತರು ದೀಪಗಳನ್ನು ಹಚ್ಚಿ ಹರಕೆ ರೂಪದಲ್ಲಿ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು. ದೇವಿಯ ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಪಟ್ಟಣದ ಮುಖ್ಯರಸ್ತೆಗಳಲ್ಲಿ ಸಕಲ ಮಂಗಲವಾದ್ಯ ಮೇಳಗಳೊಂದಿಗೆ ಉತ್ಸವವನ್ನು ನಡೆಸಿದ ನಂತರ ದೇವಿಯನ್ನು ಗುಡಿದುಂಬುವುದರೊಂದಿಗೆ ರಥೋತ್ಸವ ಹಾಗೂ ಕಾರ್ತಿಕೋತ್ಸವ ಸಂಪನ್ನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.