
ಪ್ರಜಾವಾಣಿ ವಾರ್ತೆ
ಬಳ್ಳಾರಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಹೇಳಿದ್ದಾರೆ.
‘2020–21ರಲ್ಲಿ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಯ ಸಾಕ್ಷ್ಯಚಿತ್ರ ‘ಕಿಸಾನ್ ಸತ್ಯಾಗ್ರಹ’ದ ಪ್ರದರ್ಶನವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸೂಚನೆಗಳನ್ನು ಅನುಸರಿಸಿ ನಿಷೇಧಿಸಲಾಗಿದೆ. ಇದು ರೈತ ಸಮುದಾಯಗಳ ಹಿತಾಸಕ್ತಿಗಾಗಿ ಪ್ರಾಣ ಅರ್ಪಿಸಿದ ಹುತಾತ್ಮರಿಗೆ ಮಾಡಿದ ಅಪಮಾನ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.