ADVERTISEMENT

ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 12:46 IST
Last Updated 29 ಜುಲೈ 2021, 12:46 IST
ಹೊಸಪೇಟೆ ತಾಲ್ಲೂಕಿನ ಗುಂಡ್ಲುವದ್ದೀಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗಳನ್ನು ಮಾಡಿಕೊಡಲಾಯಿತು
ಹೊಸಪೇಟೆ ತಾಲ್ಲೂಕಿನ ಗುಂಡ್ಲುವದ್ದೀಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗಳನ್ನು ಮಾಡಿಕೊಡಲಾಯಿತು   

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಗುಂಡ್ಲುವದ್ದೀಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು.

ಗುರುವಾರ ಶಾಲೆಯ ಆವರಣದಲ್ಲಿ ಇಂಡಿಯನ್ ಬ್ಯಾಂಕ್ ಶಾಖೆಯ ಸಿಬ್ಬಂದಿ ಹೊಸ ಖಾತೆಯನ್ನು ತೆರೆಯಲು ಅಗತ್ಯ ದಾಖಲಾತಿಗಳನ್ನು ವಿದ್ಯಾರ್ಥಿಗಳಿಂದ ಪಡೆದು ಪರಿಶೀಲನೆ ನಡೆಸಿದರು. ‘ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಬ್ಯಾಂಕ್ ಖಾತೆಯನ್ನು ಶೂನ್ಯ ಮೊತ್ತದಲ್ಲಿ ತೆರೆಯಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿಯೂ ಇದರಿಂದ ಪ್ರಯೋಜನವಾಗಲಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಷಣ್ಮುಖಪ್ಪ ತಿಳಿಸಿದರು.

ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಈಶ್ವರ್ ಗೌಡ, ಶಿಕ್ಷಕರಾದ ಚಾರಿ ದುರುಗಪ್ಪ, ಅಂಬರೀಷ್‌, ಮಂಜುಳಾ, ಹರೀಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.