ಬಳ್ಳಾರಿ: ಬಳ್ಳಾರಿ ಹೊರ ವಲಯದ ಸಂಜೀವರಾಯನಕೋಟೆ ಎಂಬಲ್ಲಿ ಮಂಗಳವಾರ ಮುಂಜಾನೆ ಕುರಿಗಾಹಿಯೊಬ್ಬರ ಮೇಲೆ ಕರಡಿಯೊಂದು ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ.
ಕುರುಬರ ರಾಜಪ್ಪ ದಾಳಿಗೀಡಾದ ವ್ಯಕ್ತಿ. ಘಟನೆಯಲ್ಲಿ ರಾಜಪ್ಪ ಅವರ ತಲೆ ಮತ್ತು ಮುಖಕ್ಕೆ ತೀವ್ರ ಗಾಯಗಳಾಗಿವೆ. ಕರಡಿಯ ಉಗುರುಗಳು ಚರ್ಮದ ಆಳಕ್ಕೆ ಇಳಿದಿದ್ದು, ಅರ್ಧ ಮುಖವೇ ಕಿತ್ತು ಬಂದಿದೆ.
ಕೂಡಲೇ ಅವರನ್ನು ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ–ವಿಮ್ಸ್)ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಗಾಯಗೊಂಡಿರುವ ವ್ಯಕ್ತಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ತಿಳಿಯುತ್ತಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಶ್ರೀರಾಮುಲು ರಾಜಪ್ಪ ಅವರ ಆರೋಗ್ಯ ವಿಚಾರಿಸಿದರು.
ರಾಜಪ್ಪ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ. ಗಂಗಾಧರ ಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.