ಸಾಂದರ್ಭಿಕ ಚಿತ್ರ
ಬಳ್ಳಾರಿ: ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ನ್ಯಾಯಬೆಲೆ ಅಂಗಡಿಯ ಮೇಲೆ ಶನಿವಾರ ದಾಳಿ ನಡೆಸಿರುವ ಆಹಾರ ಇಲಾಖೆ ಮತ್ತು ಪೊಲೀಸರು ಒಟ್ಟು 120 ಚೀಲ ಅಕ್ಕಿಯನ್ನು ವಶ ಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬ್ರೂಸ್‌ಪೇಟೆ ಪೊಲೀಸರು ಸುರೇಶ್ (45) ಎಂಬಾತನ ವಿರುದ್ಧ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರದ ರೂಪನಗುಡಿ ರಸ್ತೆಯ ರಾಜ್ಯೋತ್ಸವದ ನಗರದಲ್ಲಿನ ಡಿ.ತುಕಾರಾಮ್ ಸ್ಟೋರ್‌ನಲ್ಲಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ ಎರಡೂ ಇಲಾಖೆಗಳು ದಾಳಿ ನಡೆಸಿದ್ದವು.
ವಶಪಡಿಸಿಕೊಂಡಿರುವ ಅಕ್ಕಿಯ ಮೌಲ್ಯ ₹1,38,000 ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.