ADVERTISEMENT

ಬಳ್ಳಾರಿ ಲೋಕಸಭೆ ಉಪಚುನಾವಣೆ; ಮತ ಎಣಿಕೆಗೆ ಸಕಲ ‌ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2018, 9:06 IST
Last Updated 5 ನವೆಂಬರ್ 2018, 9:06 IST
   

ಬಳ್ಳಾರಿ: ‌ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನ.6ರಂದು ನಡೆಯಲಿದ್ದು ಎಲ್ಲ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ‌ಚುನಾವಣಾಧಿಕಾರಿ ಡಾ.ವಿ.ರಾಮ ಪ್ರಸಾದ್ ಮನೋಹರ ತಿಳಿಸಿದರು.

ಮತ ಎಣಿಕೆ ನಡೆಯಲಿರುವ ನಗರದ ಆರ್‌ಬಿವೈ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಣಿಕೆ ಸಲುವಾಗಿ ಎಂಟು ಕೊಠಡಿಯಲ್ಲಿ 120ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಎಣಿಕೆ ಮಧ್ಯಾಹ್ನ 12ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

ಮತ ಎಣಿಕೆ‌ ಕೇಂದ್ರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ‌ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.