
ಬಳ್ಳಾರಿ: ಗ್ರಾಹಕರ ಹಕ್ಕು, ಕರ್ತವ್ಯಗಳು ಹಾಗೂ ಗ್ರಾಹಕ ಜಾಗೃತಿಯ ಜ್ಞಾನವನ್ನು ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವುದು ಅವಶ್ಯಕವಾಗಿದೆ ಎಂದು ಕಾರ್ಯಕ್ರಮ ನೋಡಲ್ ಶಿಕ್ಷಕ ಸಾಯಿಬಣ್ಣ ಹೇಳಿದರು.
ತಾಲ್ಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಾಲಾ ಗ್ರಾಹಕರ ವೇದಿಕೆಯಲ್ಲಿ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ನೇತಾಜಿ ಸುಭಾಷ್ ಚಂದ್ರಬೋಸ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯಶಿಕ್ಷಕಿ ಎಸ್.ಕೆ.ಭಾಗ್ಯಲಕ್ಷ್ಮಿ, ಶಿಕ್ಷಕ ಸದಾಶಿವಯ್ಯ ಮಾತನಾಡಿದರು. ತಾಲ್ಲೂಕು ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಾ ಅವರನ್ನು ಸನ್ಮಾನಿಸಲಾಯಿತು. ಗ್ರಾಹಕ ವೇದಿಕೆಯ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾದ ವಿವಿದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು ವಿತರಿಸಿದರು. ಶಿಕ್ಷಕಿಯರಾದ ವೀಣಾ ನಾಗವೇಣಿ, ಸುನಿತಾ ರವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.