ADVERTISEMENT

ಬಳ್ಳಾರಿ: ತಾಲ್ಲೂಕುಗಳಲ್ಲೂ ಗೆಳತಿ ಘಟಕ ಸ್ಥಾಪನೆ

ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 14:25 IST
Last Updated 29 ಆಗಸ್ಟ್ 2018, 14:25 IST
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್ ಮಾತನಾಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್ ಮಾತನಾಡಿದರು.   

ಬಳ್ಳಾರಿ: ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಿ ಸಾಧ್ಯವಾದರೆ, ಡಿಎಂಎಫ್ ಹಣ ಬಳಸಿಕೊಂಡು ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನು ತೆರೆಯಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ 2ನೇ ತ್ರೈಮಾಸಿಕ ಜಿಲ್ಲಾಮಟ್ಟದ ಮಾನವ ಅಕ್ರಮ ಸಾಗಣೆ ತಡೆ ಕುರಿತ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡಿ, ಅಗತ್ಯವಿದ್ದಲ್ಲಿ ಪೊಲೀಸರಿಂದ ರಕ್ಷಣೆ ಹಾಗೂ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ನೊಂದ ಮಹಿಳೆಯರಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಒದಗಿಸಲಾಗುವುದು ಎಂದರು.

ADVERTISEMENT

ದೌರ್ಜನ್ಯಕ್ಕೊಳಗಾದವರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ಒದಗಿಸಲು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ವಿಶೇಷ ಚಿಕಿತ್ಸಾ ಘಟಕ ಗೆಳತಿ ಘಟಕವನ್ನು ಎಲ್ಲ ತಾಲೂಕು ಕೇಂದ್ರಗಳಲ್ಲಿ ಆರಂಭಿಬೇಕು. ಘಟಕ ಕಾರ್ಯನಿರ್ವಹಿಸಲು ಎದುರಿಸುತ್ತಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ನೀಡಿದರೆ ಬಗೆಹರಿಸಲು ಯತ್ನಿಸಲಾಗುವುದು. ಸಿಬ್ಬಂದಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲು ಸೂಚಿಸಿದರು.

ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ, ಗ್ರಾಪಂ ಮಟ್ಟದಲ್ಲಿ ಕಾವಲು ಸಮಿತಿ ಸಭೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಜಿ.ಪಂ ಉಪಕಾರ್ಯದರ್ಶಿ ಮುಕ್ಕಣ್ಣ, ಡಿವೈಎಸ್ಪಿ ಸುರೇಶ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.