ADVERTISEMENT

ಬಳ್ಳಾರಿ | ನಕಲಿ ದಾಖಲೆ: ಮಹಿಳೆ ವಿರುದ್ಧ ಪ್ರಕರಣ 

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 2:26 IST
Last Updated 7 ಫೆಬ್ರುವರಿ 2026, 2:26 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಬಳ್ಳಾರಿ: ನಕಲಿ ಜನನ ಪ್ರಮಾಣ ಪತ್ರ, ದಾಖಲೆ ಸೃಷ್ಟಿಸಿ ಸರ್ಕಾರಿ ಸೌಲಭ್ಯ ಪಡೆಯಲು ಸಲ್ಲಿಸಿದ್ದ ಮಹಿಳೆಯೊಬ್ಬರ ವಿರುದ್ಧ ಇಲ್ಲಿನ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಘಟನೆಯ ಹಿನ್ನೆಲೆ: ವಂಶವೃಕ್ಷ ಪ್ರಮಾಣ ಪತ್ರ ಕೋರಿ ರಾಧಾ ಎಂಬುವವರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಪ್ರತಿವಾದಿಯಾದ ಹಸೀನಾ ಅಲಿಯಾಸ್ ಅಶ್ವಿನಿ ಎಂಬುವವರು ಸಲ್ಲಿಸಿದ್ದ ಜನನ ಪ್ರಮಾಣ ಪತ್ರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬೆಳಕಿಗೆ ಬಂದಿದೆ.

ADVERTISEMENT

ದಾಖಲೆ ತಿದ್ದಿದ ಆರೋಪ: ಮೊಹಮ್ಮದ್ ಅಯಾನ್ (ತಂದೆ ಚಾಂದ್ ಬಾಷಾ) ಎಂಬುವವರ ಹೆಸರಿನಲ್ಲಿದ್ದ ಜನನ ಪ್ರಮಾಣ ಪತ್ರವನ್ನು ಅಕ್ರಮವಾಗಿ ತಿದ್ದಿ, ಶ್ರಾವಣಿ (ತಂದೆ ಮೊದಲ ಚೆಂಚಯ್ಯ, ತಾಯಿ ಅಶ್ವಿನಿ) ಎಂಬ ಹೆಸರಿಗೆ ನಿಯಮಬಾಹಿರವಾಗಿ ತಿದ್ದುಪಡಿ ಮಾಡಲಾಗಿದೆ. ಹೀಗಾಗಿ ಹಸೀನಾ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪೊಲೀಸರು  ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ರಾಜೇಶ್ ಎಚ್.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.