ಬಳ್ಳಾರಿ: ನಗರದ ವಿವಿಧೆಡೆ ಸೋಮವಾರ ಮಧ್ಯಾಹ್ನದಿಂದ ಗುಡುಗು ಸಿಡಿಲಿನಿಂದ ಕೂಡಿದ ಆಲಿಕಲ್ಲು ಸಹಿತ ಮಳೆ ಸುರಿಯಲಾರಂಭಿಸಿದೆ.
ನಗರದ ಕೌಲ್ ಬಜಾರ್, ರೇಣುಕಾಚಾರ್ಯ ನಗರ, ಬಂಡಿಹಟ್ಟಿ ಸೇರಿದಂತೆ ಕೆಲವೆಡೆ ಆಲಿಕಲ್ಲು ಮಳೆ ಸುರಿಯುತ್ತಿದೆ.
ನಗರದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಇನ್ನೂ ಎರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.