ADVERTISEMENT

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 3:02 IST
Last Updated 2 ಜನವರಿ 2026, 3:02 IST
<div class="paragraphs"><p>ಘರ್ಷಣೆ ವೇಳೆ ಹಾರಿದ ಗುಂಡು ಪ್ರದರ್ಶಿಸುತ್ತಿರುವ ಶಾಸಕ ಜನಾರ್ದನ ರೆಡ್ಡಿ</p></div>

ಘರ್ಷಣೆ ವೇಳೆ ಹಾರಿದ ಗುಂಡು ಪ್ರದರ್ಶಿಸುತ್ತಿರುವ ಶಾಸಕ ಜನಾರ್ದನ ರೆಡ್ಡಿ

   

ಬಳ್ಳಾರಿ: ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಆದ ಮೊದಲ ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಜ.1ರ ರಾತ್ರಿ 1ಗಂಟೆ ಸುಮಾರಿನಲ್ಲಿ ಈ ಎಫ್ಐಆರ್ ದಾಖಲಾಗಿದೆ.

ADVERTISEMENT

ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜನಾರ್ದನ ರೆಡ್ಡಿ ಅವರನ್ನು ಪ್ರಕರಣದಲ್ಲಿ ಎ1 ಆರೋಪಿ ಮಾಡಲಾಗಿದೆ. ಸೋಮಶೇಖರ ರೆಡ್ಡಿ ಎ2, ಶ್ರೀರಾಮುಲು ಎ3, ಪಾಲಿಕೆ ವಿರೋಧ ಪಕ್ಷದ ನಾಯಕ‌ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ. ಒಟ್ಟು 11 ಮಂದಿಯನ್ನು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ.

'ಬಳ್ಳಾರಿಯ ವಾಲ್ಮೀಕಿ ವೃತ್ತದಲ್ಲಿನ ವಾಲ್ಮೀಕಿ ಪ್ರತಿಮೆ ಅನಾವಣದ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದಕ್ಕಾಗಿ ನಗರದಲ್ಲಿ ಬ್ಯಾನರ್ ಅಳವಡಿಸಲಾಗುತ್ತಿತ್ತು. ಗುರುವಾರ ಸಂಜೆ ಜನಾರ್ದನ ರೆಡ್ಡಿ ರವರ ಮನೆಯ ಹತ್ತಿರ ಸಿರುಗುಪ್ಪ ರಸ್ತೆಯ ಪಕ್ಕದಲ್ಲಿ ಹಾಕಿದ್ದ ಬ್ಯಾನರ್‌ಗಳನ್ನು ಜನಾರ್ದನ ರೆಡ್ಡಿ ಮತ್ತು ಇತರರು ಕಿತ್ತು ಹಾಕಿರುವುದನ್ನು ಸತೀಶ್ ರೆಡ್ಡಿ ರವರು ಪ್ರಶ್ನೆ ಮಾಡಿದ್ದರು. ಜನಾರ್ದನ ರೆಡ್ಡಿ ಸೋಮಶೇಖ‌ರ್ ರೆಡ್ಡಿ ಹಾಗೂ ಅವರ ಬೆಂಬಲಿಗರು ಉದ್ದೇಶ ಪೂರ್ವಕವಾಗಿ ಬ್ಯಾನರ್ ಗಳನ್ನು ಹರಿದಿದ್ದಾರೆ. ಸತೀಶ್ ರೆಡ್ಡಿ ಹಾಗೂ ಗನ್ ಮ್ಯಾನ್ ಬಸವರಾಜ್ ಜತೆಗೆ ಜಗಳ ತೆಗೆದಿದ್ದಾರೆ. ಬಳಿಕ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಎಂಬವರಿಗೂ ಪೆಟ್ಟಾಗಿರುತ್ತದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು' ಎಂದು ಚಾನಾಳ್ ಶೇಖರ್ ದೂರಿದ್ದಾರೆ‌.

ದೂರು ಆಧರಿಸಿ ಬ್ರೂಸ್ ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.