ಬಳ್ಳಾರಿ: ‘ಬಳ್ಳಾರಿಯನ್ನು ದೇಶದ ಮಾರುಕಟ್ಟೆಯ ಎರಡನೇ ಹಬ್ ಮಾಡಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ’ ಎಂದು ಸಂಸದ ಇ. ತುಕಾರಾಂ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನವೀಕೃತ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
‘ಬಳ್ಳಾರಿ ಜಿಲ್ಲೆಯು ಭೌಗೋಳಿಕವಾಗಿ ಭಿನ್ನವಾಗಿದೆ. ಸಂಡೂರು ತಾಲೂಕಿನಲ್ಲಿ ಮ್ಯಾಂಗನೀಸ್, ಕಬ್ಬಿಣದ ಅದಿರು ಇದೆ. ಕಂಪ್ಲಿ, ಕುರುಗೋಡು ಮತ್ತು ಸಿರುಗುಪ್ಪ ತಾಲೂಕಿನಲ್ಲಿ ತುಂಗಭದ್ರಾ ನದಿ ಮತ್ತು ನೀರಿದೆ. ಸಹಜವಾಗಿಯೇ ಬಳ್ಳಾರಿಯನ್ನು ಮುಂಬಯಿ ಮಾರುಕಟ್ಟೆ ನಂತರದ ಹಬ್ ಮಾಡಲು ಪ್ರಯತ್ನ ನಡೆದಿದೆ’ ಎಂದರು.
ಹೊಸಪೇಟೆ - ಬಳ್ಳಾರಿ ಹೆಚ್ಚುವರಿ ಗೂಡ್ಸ್ ಮಾರ್ಗಕ್ಕೆ ಅನುಮೋದನೆ ಸಿಕ್ಕಿದೆ. ಸುಧಾ ಸರ್ಕಲ್, ರೇಡಿಯೋಪಾರ್ಕ್, ಟ್ರಾಮಾಕೇರ್, ಸೂಪರ್ ಸ್ಪೆಷಾಲಿಟಿ, ಅತ್ಯಾಧುನಿಕ ಆಂಬುಲೆನ್ಸ್, ವಿಮ್ಸ್ ಆಸ್ಪತ್ರೆ, ಎಂಆರ್‌ಐ ಯಂತ್ರ ಹೀಗೇ ಅನೇಕ ಅಭಿವೃದ್ಧಿ ಕೆಲಸಗಳನ್ನು ಪ್ರಸ್ತಾಪಿಸಿದ ಸಂಸದ ಇ. ತುಕಾರಾಂ, ವೇಣಿವೀರಾಪುರ - ಹಗರಿ, ಹಗರಿಯಿಂದ ಸಿರುಗುಪ್ಪ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ’ ಎಂದರು.
ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಅವರು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧ. ಬಳ್ಳಾರಿಯ ಅಭಿವೃದ್ಧಿಗೆ ಸಂಸದರ ನಿಧಿಯ ಶೇ 75ರಷ್ಟನ್ನು ವಿನಿಯೋಗಿಸಿದ್ದೇನೆ’ ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು, ‘ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಟ್ಟು ₹300 ಕೋಟಿ ವೆಚ್ಚದ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ’ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಲಿಡ್ಕರ್ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿದರು.
ಬಿಡಿಸಿಸಿಐನ ಹಿರಿಯ ಉಪಾಧ್ಯಕ್ಷ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ಬಿ. ಮಹಾರುದ್ರಗೌಡ, ಮಾಜಿ ಅಧ್ಯಕ್ಷ ಸಿ. ಶ್ರೀನಿವಾಸರಾವ್, ಖಜಾಂಚಿ ಪಿ. ಪಾಲಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.