
ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಎಲ್ಲ ತಾಲ್ಲೂಕು ನ್ಯಾಯಾಲಯಗಳು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲು ಜನವರಿ 2ರಿಂದ ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0’ ಎಂಬ 90 ದಿನಗಳ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿಯ ಸಹಯೋಗದೊಂದಿಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0’ ಅಭಿಯಾನವನ್ನು ರೂಪಿಸಿದೆ.
‘ರಾಜಿಯಾಗಬಹುದಾದ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಲಾಗುತ್ತದೆ. ಈ ಅಭಿಯಾನಕ್ಕೆ ಎರಡೂ ಜಿಲ್ಲೆಯ ವಕೀಲರು ಮತ್ತು ಕಕ್ಷಿದಾರರು ಸಹಕಾರ ನೀಡಲಿದ್ದಾರೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.