ADVERTISEMENT

ಬಳ್ಳಾರಿ | ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 13:36 IST
Last Updated 4 ಸೆಪ್ಟೆಂಬರ್ 2024, 13:36 IST
ಕೆ.ಎನ್. ಮಲ್ಲಿಕಾರ್ಜುನ
ಕೆ.ಎನ್. ಮಲ್ಲಿಕಾರ್ಜುನ   

ಕಂಪ್ಲಿ: ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎನ್. ಮಲ್ಲಿಕಾರ್ಜುನ 2023-24ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸೆ.5ರಂದು ಬಳ್ಳಾರಿಯ ಶ್ರೀಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.