ADVERTISEMENT

ಬಳ್ಳಾರಿ: ಮೋಕಾ ಪೊಲೀಸ್ ಠಾಣೆ ಪಿಎಸ್‌ಐ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:56 IST
Last Updated 16 ಆಗಸ್ಟ್ 2025, 7:56 IST
ಚೈತ್ರಾ
ಚೈತ್ರಾ   

ಬಳ್ಳಾರಿ: ಮೋಕಾ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕಾಳಿಂಗ ಅವರ ಪತ್ನಿ ಚೈತ್ರಾ (36) ಅವರು ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಾಳಿಂಗ ಮತ್ತು ಅವರ ಕುಟುಂಬ ಮೋಕಾದಲ್ಲಿನ ಪೊಲೀಸ್ ವಸತಿಗೃಹದಲ್ಲಿ ತಂಗಿದ್ದರು. ಪತಿ ಮತ್ತು ಮಕ್ಕಳು ಸ್ವಾತಂತ್ರ್ಯೋತ್ಸವಕ್ಕೆ ತೆರಳಿದ್ದ ವೇಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ.

ಚೈತ್ರಾ ಅವರು ಮೂಲತಃ ಹೊಸಪೇಟೆಯ ಮಲಪನಗುಡಿಯವರು.

ADVERTISEMENT

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಪರಿಶೀಲನೆ ನಡೆಸಿ, ‘ಕಾಳಿಂಗ ಅವರ ಪತ್ನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆತ್ಮಹತ್ಯೆ ಬಗ್ಗೆ ಅವರ ಕುಟುಂಬಸ್ಥರು ನೀಡುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.