ಬಳ್ಳಾರಿ: ‘ಒಳ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಆಗಸ್ಟ್ 18ಕ್ಕೆ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎ.ನೆಟ್ಟಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆ.18ರಂದು ನಡೆಯುವ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ದಲಿತ ಹಕ್ಕುಗಳ ಹೋರಾಟಗಾರ, ಮಂದಕೃಷ್ಣ, ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ನರಸಪ್ಪ ದಂಡೋರ, ರಾಜ್ಯ ಉಪಾಧ್ಯಕ್ಷ ಎ.ಕೆ.ಹುಲುಗಪ್ಪ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ’ ಎಂದರು.
‘ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು 2024ರ ಆಗಸ್ಟ್1 ರಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೂ, ರಾಜ್ಯ ಸರಕಾರ ಕಾಲಹರಣ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ’ ಎಂದರು.
ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.