
ಪ್ರಜಾವಾಣಿ ವಾರ್ತೆ
ಬಳ್ಳಾರಿ: ‘ನಗರದಲ್ಲಿ ನನ್ನಿಂದ ಏನಾದರೂ ಶಾಂತಿಗೆ ಭಂಗವಾಗಿದ್ದರೆ ಸಾರ್ವಜನಿಕರ ಕ್ಷಮೆಯಾಚಿಸುವೆ’ ಎಂದು ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
‘ಯಾರಿಂದಲೇ ಘಟನೆ ನಡೆದಿರಲಿ. ತನಿಖೆ ಬಳಿಕ ನಿಜ ಸಂಗತಿ ಬಯಲಾಗಲಿದೆ. ನಿನ್ನೆ ನಡೆದ ಬೆಳವಣಿಗೆಯಲ್ಲಿ ನನ್ನಿಂದ ಜನರಿಗೆ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಇದೊಂದು ಆಕಸ್ಮಿಕ ಘಟನೆ. ಶಾಸಕನಾಗಿ ನಾನು ಜನರ ಕ್ಷಮೆ ಕೇಳುವೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ನಾಗೇಂದ್ರ ಮಾತನಾಡಿ, ‘ಬಳ್ಳಾರಿಯಲ್ಲಿ ಶನಿವಾರ ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ತಾತ್ಕಾಲಿಕ ಮುಂದೂಡುವ ವಿಷಯಕ್ಕೆ ಶಾಸಕ ಭರತ್ ರೆಡ್ಡಿ ಅವರ ಮನವೊಲಿೇತಹ ಮುಖ್ಯಮಂತ್ರಿ ಸೂಚಿಸಿ, ಬಳ್ಳಾರಿಗೆ ನನ್ನನ್ನು ಕಳಿಸಿಕೊಟ್ಟಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೂಚನೆಯಂತೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ’ ಎಂದು ತಿಳಿಸಿದರು.