
ಕೂಡ್ಲಿಗಿ: ಭೀಮಾ ಕೋರೆಗಾಂವ್ ಯುದ್ಧವು ದೇಶದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಇದು ಸ್ವಾಭಿಮಾನ ಮತ್ತು ಸ್ಪೂರ್ತಿಯ ಸಂಕೇತವಾಗಿದೆ ಎಂದು ಶಾಸಕ ಡಾ. ಶ್ರೀನಿವಾಶ್ ಎನ್.ಟಿ. ಹೇಳಿದರು.
ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ರ‍್ಯಾಲಿಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಸೂರು, ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ದೇವದಾಸಿ ಮರು ಪರಿಶೀಲನೆ ಸೇರಿದಂತೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಪೌರ ಕಾರ್ಮೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪ್ರಭಾಕರ್, ಡಿಎಸ್‍ಎಸ್ ಮುಖಂಡರಾದ ಎಸ್. ದುರುಗೇಶ್, ಡಿ.ಎಚ್. ದುರುಗೇಶ್, ಮಾಜಿ ಸೈನಿಕ ಎಚ್. ರಮೇಶ್, ಬಂಡೇ ರಾಘವೇಂದ್ರ, ಎಳನೀರು ಗಂಗಣ್ಣ, ಶುಕೂರ್, ಡಾಣಿ ರಾಘವೇಂದ್ರ, ಬಡೇಲಡಕು ದುರುಗೇಶ್, ಮಹೇಶ್, ಮೂಗಪ್ಪ, ಅಜೇಯಕುಮಾರ್, ಶಿವರಾಜ್, ಪರುಶುರಾ, ಬಸವರಾಜ, ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.
ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲು ವಿಜಯೋತ್ಸವ ಮೆರವಣಿಗೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.