ADVERTISEMENT

ತೆಕ್ಕಲಕೋಟೆ | ಬೈಕ್ ಡಿಕ್ಕಿ: ಅಯ್ಯಪ್ಪ ಮಾಲಾಧಾರಿ ಸಾವು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 2:58 IST
Last Updated 18 ಡಿಸೆಂಬರ್ 2025, 2:58 IST
ಕುಮಾರ್
ಕುಮಾರ್   

ತೆಕ್ಕಲಕೋಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150-ಎ ಬಳಿಯ ದೇವಿನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ  ನಡೆದಿದೆ.

20ನೇ ವಾರ್ಡ್ ನಿವಾಸಿ ಅಯ್ಯಪ್ಪ ಮಾಲಾಧಾರಿ ಕುಮಾರ್ (40) ಮೃತ ದುರ್ದೈವಿ. ದೇವಸ್ಥಾನಕ್ಕೆ ನಡೆದು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಚಿಕಿತ್ಸೆಗಾಗಿ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟಿದ್ದಾರೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT