ಸಾವು
ಪ್ರಾತಿನಿಧಿಕ ಚಿತ್ರ
ಹೂವಿನಹಡಗಲಿ: ತಾಲ್ಲೂಕಿನ ನಾಗತಿಬಸಾಪುರ ಸಮೀಪ ಶನಿವಾರ ಬೈಕ್‌ನಿಂದ ಬಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ದೊಡ್ಡಘಟ್ಟ ಗ್ರಾಮದ ಎಚ್.ಜೆ.ಹರೀಶ್ (27) ಮೃತರು. ಹರಪನಹಳ್ಳಿಯಿಂದ ಹೂವಿನಹಡಗಲಿ ಮಾರ್ಗವಾಗಿ ಮುಂಡರಗಿ ತಾಲ್ಲೂಕು ಗಂಗಾಪೂರಕ್ಕೆ ಬೈಕ್‌ನಲ್ಲಿ ಹೋಗುತ್ತಿರುವಾಗ ನಾಗತಿಬಸಾಪುರ ಸಮೀಪ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹರೀಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈತನ ಸ್ನೇಹಿತ ಹಿಂಬದಿ ಸವಾರ ಮಧು ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.