ADVERTISEMENT

ಲಾರಿ ಡಿಕ್ಕಿ; ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 13:25 IST
Last Updated 25 ನವೆಂಬರ್ 2022, 13:25 IST
   

ಹೊಸಪೇಟೆ (ವಿಜಯನಗರ): ಲಾರಿ ಡಿಕ್ಕಿ ಹೊಡೆದಿದ್ದರಿಂದ ಬೈಕ್‌ ಸವಾರ ಮೃತಪಟ್ಟ ಘಟನೆ ತಾಲ್ಲೂಕಿನ ಕಮಲಾಪುರ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಶುಕ್ರವಾರ ನಡೆದಿದೆ.

ಮೃತರನ್ನು ಕಮಲಾಪುರದ 11ನೇ ವಾರ್ಡ್‌ ನಿವಾಸಿ ರಮೇಶ್‌ ಎಂದು ಗುರುತಿಸಲಾಗಿದೆ. ರಮೇಶ್‌ ಮತ್ತು ಶಿವು ಎಂಬುವರು ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಕಮಲಾಪುರದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಮೇಶ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT