ADVERTISEMENT

ಟಿಎಂಸಿ ನಾಯಕಿ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 9:42 IST
Last Updated 17 ಏಪ್ರಿಲ್ 2021, 9:42 IST
ಬಿಜೆಪಿ ಕಾರ್ಯಕರ್ತರು ಶನಿವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬಿಜೆಪಿ ಕಾರ್ಯಕರ್ತರು ಶನಿವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿಯವರನ್ನು ಅಪಮಾನಿಸಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕಿ ಸುಜಾತ ಮಂಡಲ್‌ ಖಾನ್‌ ನೀಡಿದ್ದಾರೆ ಎನ್ನಲಾದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ರಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.
‘ಪರಿಶಿಷ್ಟ ಜಾತಿಯವರು ಬೇಡುವ ಭಿಕ್ಷುಕರು’ ಎಂದು ಹೇಳಿ ಅವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತಿ ಸಂದರ್ಭದಲ್ಲೇ ಈ ಹೇಳಿಕೆ ಕೊಟ್ಟಿರುವುದು ದುರದೃಷ್ಟಕರ. ಸುಜಾತ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಜೆ.ಬಿ. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಎಸ್‌.ಎಚ್‌. ಮಲ್ಲಪ್ಪ, ಬಾಡಪ್ಪ, ಯಲ್ಲಪ್ಪ ಕರಿ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.