ADVERTISEMENT

ಬಸವ ಜಯಂತಿಗೆ ಮೇ 5ರಂದು ರಕ್ತದಾನ

​ಪ್ರಜಾವಾಣಿ ವಾರ್ತೆ
Published 3 ಮೇ 2019, 11:38 IST
Last Updated 3 ಮೇ 2019, 11:38 IST

ಹೊಸಪೇಟೆ: ಬಸವ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರವನ್ನು ಇಲ್ಲಿನ ಕೊಟ್ಟೂರು ಸಂಸ್ಥಾನ ಮಠದಲ್ಲಿ ಮೇ 5ರಂದು ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕರ ವರೆಗೆ ಹಮ್ಮಿಕೊಳ್ಳಲಾಗಿದೆ.

ಕೊಟ್ಟೂರು ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ ಚಾಲನೆ ನೀಡುವರು. ಗರಗ ನಾಗಲಾಪುರದ ಗುರು ಒಪ್ಪತ್ತೇಶ್ವರ ಮಠದ ಮರಿಮಹಾಂತ ಸ್ವಾಮೀಜಿ, ಮರಿಯಮ್ಮನಹಳ್ಳಿ ಕೆ.ಬಿ. ಗುರುಪಾದ ದೇವರಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಪ್ರಾಧ್ಯಾಪಕ ಚಂದ್ರಶೇಖರ ಶಾಸ್ತ್ರಿ ರಕ್ತದಾನದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡುವರು. ಉದ್ಯಮಿ ಗೊಗ್ಗ ಚನ್ನಬಸವರಾಜ, ವಿಜಯನಗರ ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಕಿರ್ಲೊಸ್ಕರ್‌ ವ್ಯವಸ್ಥಾಪಕ ನಿರ್ದೇಶಕ ಆರ್‌.ವಿ. ಗುಮಾಸ್ತೆ, ಡಾ. ಮೃತ್ಯುಂಜಯ ಆರ್‌. ವಸ್ತ್ರದ್, ಡಾ. ಆರ್‌. ಪೆರುಮಾಳ್‌ ಸ್ವಾಮಿ, ಡಾ. ಎ. ಸುಮಂಗಲಾ ದೇವಿ, ಆರ್‌. ಮಹಾಬಲೇಶ್ವರ ರೆಡ್ಡಿ, ಪ್ರಾಚಾರ್ಯ ವಿ.ಎಸ್‌. ಪ್ರಭಯ್ಯ, ಸಂಚಾರ ಠಾಣೆ ಇನ್‌ಸ್ಪೆಕ್ಟರ್‌ ಅಯ್ಯನಗೌಡ ವಿ. ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ತಾಲ್ಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಎಸ್‌.ಎಂ. ಕಾಶಿನಾಥಯ್ಯ ಅಧ್ಯಕ್ಷತೆ ವಹಿಸುವರು.

ADVERTISEMENT

ವಿಶೇಷ ಉಪನ್ಯಾಸ:

ಬಸವ ಜಯಂತಿ ನಿಮಿತ್ತಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇದೇ 7ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಆಕಾಶವಾಣಿ ನಿವೃತ್ತ ನಿರ್ದೇಶಕ ಬಸವರಾಜ ಸಾದರ ವಿಶೇಷ ಉಪನ್ಯಾಸ ನೀಡುವರು.

ಕುಲಪತಿ ಪ್ರೊ. ಸ.ಚಿ. ರಮೇಶ್‌, ಪ್ರಾಧ್ಯಾಪಕ ಅಮರೇಶ ನುಗಡೋಣಿ, ಕೂಡಲಸಂಗಮ ಅಂತರರಾಷ್ಟ್ರೀಯ ವಚನ ಅಧ್ಯಯನ ಕೇಂದ್ರದ ಮುಖ್ಯಸ್ಥ ಎಸ್‌.ಆರ್. ಚನ್ನವೀರಪ್ಪ ಉಪಸ್ಥಿತರಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.