ADVERTISEMENT

ಪದ್ಮಶಾಲಿ ಯುವಕರ ಸಂಘದಿಂದ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 8:54 IST
Last Updated 28 ಜೂನ್ 2022, 8:54 IST
ಪದ್ಮಶಾಲಿ ಯುವಕ ಸಂಘದಿಂದ ಸೋಮವಾರ ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಿದರು
ಪದ್ಮಶಾಲಿ ಯುವಕ ಸಂಘದಿಂದ ಸೋಮವಾರ ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಿದರು   

ಹೊಸಪೇಟೆ (ವಿಜಯನಗರ): 'ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಏಳಿಗೆ ಜೊತೆಗೆ ಆರೋಗ್ಯದ ಕಡೆಗೂ ಒತ್ತು ನೀಡಬೇಕು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಿಳಿಸಿದರು.

ನಗರದಲ್ಲಿ ಸೋಮವಾರ ಪದ್ಮಶಾಲಿ ಯುವಕ ಸಂಘದಿಂದ ಹಮ್ಮಿಕೊಂಡಿದ್ದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಅಂಕ ಗಳಿಸುವ ಮೂಲಕ ಸನ್ಮಾನಕ್ಕೆ ಪಾತ್ರರಾದಾಗ ಸಾಧನೆಗೆ ಮಾರ್ಗವಾಗುತ್ತದೆ. ಸಮಾಜದಲ್ಲಿ ದಾನಿಗಳು ಸೇವಾ ಮನೋಭಾವ ಬೆಳೆಸಿಕೊಂಡಾಗ ಬಡ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದರು.

ADVERTISEMENT

ನೇಕಾರ ಒಕ್ಕೂಟದ ಅಧ್ಯಕ್ಷ ಬಸವರಾಜ ನಾಲತ್ವಾಡ, ಪದ್ಮಶಾಲಿ ಬಹುತ್ತಮ ಸಮಾಜದ ಅಧ್ಯಕ್ಷ ರಾಜೂರು ವಾಸೆ ಮಾರ್ಕಂಡಪ್ಪ, ನಗರಸಭೆ ಸದಸ್ಯ ಕಾರದಪುಡಿ ಮಹೇಶ್, ಮುಖಂಡರಾದ ಇಲ್ಲಾಣದ ರಾಮಚಂದ್ರಪ್ಪ, ವಗ್ಗ ಜಯರಾಮ್, ಆರವಾ ಮೀನಾಕ್ಷಮ್ಮ, ಗುರ್ರಂ ಶ್ರೀನಿವಾಸ, ಪ್ರೇಮ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.