ADVERTISEMENT

ಲಂಚ: ಬಳ್ಳಾರಿ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ‌ ಬಲೆಗೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 12:49 IST
Last Updated 15 ಅಕ್ಟೋಬರ್ 2019, 12:49 IST
   

ಬಳ್ಳಾರಿ: ನಗರ ಹೊರವಲಯದ ಎಲ್ಎಲ್‌ಸಿಕಾಲೊನಿಯಲ್ಲಿನ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ‌ ವಿಶೇಷ ಭೂ ಸ್ವಾಧೀನಾಧಿಕಾರಿ ಮನೆ ಮೇಲೆ‌ ಮಂಗಳವಾರ ದಾಳಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳ ತಂಡವು, ಲಂಚ ಪಡೆಯುತ್ತಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಹಾಗೂ ಕಚೇರಿಯ ಸಿಬ್ಬಂದಿ ಕೆ.ಸಿದ್ದಪ್ಪ ಅವರನ್ನು ವಶಕ್ಕೆ ಪಡೆಯಿತು.

ಬಳ್ಳಾರಿಯಿಂದ ಹಿರಿಯೂರಿನವರೆಗೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯ ಸಲುವಾಗಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಹೋಬಳಿ ವ್ಯಾಪ್ತಿಯ ಮುರಡಿ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಎ.ವೆಂಕಟರಮಣ ಅವರ ಭೂಮಿಯ ಪರಿಹಾರ ಮೊತ್ತದ ₹ 1,04,828 ಮೌಲ್ಯದ ಚೆಕ್ ನೀಡಲು ₹8 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಸಿಕ್ಕಿಬಿದ್ದರು.

ಚೆಕ್ ನೀಡಲು ಅಧಿಕಾರಿ ಲಂಚದಬೇಡಿಕೆ ಇಟ್ಟಿದ್ದಾರೆಂಬ ದೂರನ್ನು ವೆಂಕಟರಮಣ ಎಸಿಬಿ ಪೊಲೀಸರಿಗೆ ನೀಡಿದ್ದರು. ಆ ದೂರಿನ ಅನ್ವಯ ಈ ದಿನ ದಾಳಿ ಮಾಡಲಾಗಿದ್ದು, ಎಂಟು ಸಾವಿರ ರೂ.ಗಳ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಂದು ಎಸಿಬಿ ಡಿವೈಎಸ್ಪಿ ಚಂದ್ರಕಾಂತಪೂಜಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.