ADVERTISEMENT

ಬಿ.ಎಸ್‌.ವೈಗೆ ಬುದ್ಧಿ ಭ್ರಮಣೆಯಾಗಿದೆ: ವಿ.ಎಸ್‌. ಉಗ್ರಪ್ಪ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2019, 9:40 IST
Last Updated 1 ಮಾರ್ಚ್ 2019, 9:40 IST
ವಿ.ಎಸ್‌. ಉಗ್ರಪ್ಪ
ವಿ.ಎಸ್‌. ಉಗ್ರಪ್ಪ   

ಹೊಸಪೇಟೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತೀಯ ವಾಯುಪಡೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿರುವ ವಿಷಯವನ್ನು ಯಡಿಯೂರಪ್ಪ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಇದನ್ನು ನಾನು ಕಟುವಾಗಿ ಖಂಡಿಸುತ್ತೇನೆ’ ಎಂದರು.

‘ಯಡಿಯೂರಪ್ಪನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎಂಬುದೇ ಗೊತ್ತಿಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 150 ಮಿಷನ್‌ ಎಂದು ಹೇಳಿದ್ದರು. ಈಗ ಮಿಷನ್‌ 22 ಎನ್ನುತ್ತಿದ್ದಾರೆ. ರಾಜ್ಯ, ರಾಷ್ಟ್ರದಲ್ಲಿ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಲೆ ಇದೆ. ಅದಕ್ಕೆ ಹಲವು ಕಾರಣಗಳಿವೆ’ ಎಂದು ತಿಳಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.