
ಪ್ರಾತಿನಿಧಿಕ ಪತ್ರ
ಬಳ್ಳಾರಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ‘ಬಾಲಗೌರವ ಪ್ರಶಸ್ತಿ’ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪಡೆದಿರಬೇಕು.
ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆ.20 ರೊಳಗಾಗಿ ಧಾರವಾಡ ಜಿಲ್ಲೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಕಚೇರಿ, ಅಂಚೆ ವಿಳಾಸ-580004 ಕ್ಕೆ ಸಲ್ಲಿಸಬೇಕು.
ಅರ್ಜಿಗಳನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.