ADVERTISEMENT

ಸಂಡೂರು: ಕಾಲುವೆಯಲ್ಲಿ ಕೊಚ್ಚಿಹೋಗಿದ್ದ ಮಹಿಳೆ ಶವವಾಗಿ ಪತ್ತೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 5:13 IST
Last Updated 22 ನವೆಂಬರ್ 2025, 5:13 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಸಂಡೂರು: ತಾಲ್ಲೂಕಿನ ಕುರೆಕುಪ್ಪ ಪಟ್ಟಣದ ಬಳಿಯ ಎಚ್‍ಎಲ್‍ಸಿ ಕಾಲುವೆಗೆ ಟ್ಯ್ರಾಕ್ಟರ್ ಒಂದು ಬುಧವಾರ ಸಂಜೆ ಉರುಳಿಬಿದ್ದು ಕಾಲುವೆಯ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆ ಬಳ್ಳಾರಿಯ ಕೊಳಗಲ್ಲು ಗ್ರಾಮದ ಬಳಿ ಕಾಲುವೆಯಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

ADVERTISEMENT

ಕಂಪ್ಲಿ ತಾಲ್ಲೂಕಿನ ದೇವಲಾಪುರ ಗ್ರಾಮದ ನಿವಾಸಿ ಕಾಮಾಕ್ಷಮ್ಮ (42) ಮೃತ ಮಹಿಳೆ.

ಮಹಿಳೆ ಹಾಗೂ ಟ್ರ್ಯಾಕ್ಟರ್ ಚಾಲಕ ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದಿಂದ ದೇವಲಾಪುರ ಗ್ರಾಮಕ್ಕೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯ್ರಾಕ್ಟರ್ ಕಾಲುವೆಗೆ ಉರುಳಿದೆ. ತಕ್ಷಣ ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯ ರಕ್ಷಣೆ ಸಾಧ್ಯವಾಗಿರಲಿಲ್ಲ.

ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿ, ತೋರಣಗಲ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಕಾಲುವೆಯ ನೀರಿನಲ್ಲಿದ್ದ ಟ್ಯ್ರಾಕ್ಟರ್‌ಅನ್ನು ಹೊರ ತೆಗೆದಿದ್ದಾರೆ.

ಮೃತಎ ಸಂಬಂಧಿ ಷಣ್ಮುಖಪ್ಪ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.