ADVERTISEMENT

ಸಂಡೂರು | ಕಾರು, ಲಾರಿ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 26 ಮೇ 2025, 8:27 IST
Last Updated 26 ಮೇ 2025, 8:27 IST
   

ಸಂಡೂರು (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ಜೈಸಿಂಗಾಪುರ ಗ್ರಾಮದ ಬಳಿ ಅದಿರು ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಡೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿಗಳಾದ ಆಶಾ (28 )ಜಯಲಕ್ಷ್ಮಿ (21), ಒಬ್ಬ ಬಾಲಕ ಮತ್ತು ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಅದಿರು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಸಂಡೂರು ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.