ಕೂಡ್ಲಿಗಿ: ಡಾಬಾದಿಂದ ಹೆದ್ದಾರಿಗೆ ನುಗ್ಗಿಬಂದ ಲಾರಿಗೆ, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಡವಿಸೂರವ್ವನಹಳ್ಳಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಜಗಳೂರು ತಾಲ್ಲೂಕಿನ ಮಾದೇಮುತ್ತೇನಹಳ್ಳಿ ನಿವಾಸಿ ರಘು (19) ಮೃತ ಬೈಕ್ ಸವಾರ. ಬೈಕ್ ಹಿಂಬದಿ ಸವಾರಿ ಮಾಡುತ್ತಿದ್ದ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನರಕೆರೆ ಗ್ರಾಮದ ವಿನಯ ಹಾಗೂ ಶರಣ ಎನ್ನುವ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಹೆದ್ದಾರಿ ಗಸ್ತು ವಾಹನದಲ್ಲಿ ಅವರಿಗೆ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಕೂಡ್ಲಿಗಿಯಿಂದ ಕ್ಯಾಸನಕೆರೆ ಗ್ರಾಮಕ್ಕೆ ಬೈಕ್ ಸವಾರರು ತೆರಳುತ್ತಿದ್ದಾಗ ಮದನ್ ಡಾಬಾ ಕಡೆಯಿಂದ ಹೆದ್ದಾರಿಗೆ ಲಾರಿಯು ವೇಗವಾಗಿ ನುಗ್ಗಿದೆ. ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.