ಬಳ್ಳಾರಿ: ನಗರದ ಹನ್ನೊಂದು ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಿತು.
ಪರೀಕ್ಷೆಗೆ ಒಟ್ಟಾರೆ 6,667 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಳಗ್ಗೆ 10.30 ರಿಂದ 11.50ರವರೆಗೆ ನಡೆದ ಭೌತಶಾಸ್ತ್ರ ಪರೀಕ್ಷೆಗೆ ಒಟ್ಟು 6,397 ಅಭ್ಯರ್ಥಿಗಳು ಹಾಜರಾಗಿದ್ದರು. 270 ಅಭ್ಯರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನ 2.30ರಿಂದ 3.50ರವರೆಗೆ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 6,400 ಅಭ್ಯರ್ಥಿಗಳು ಹಾಜರಾಗಿದ್ದರು. 267 ಮಂದಿ ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.