ADVERTISEMENT

‘ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಗೆ ಸಹಕಾರ ಅಗತ್ಯ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:32 IST
Last Updated 18 ಜೂನ್ 2025, 15:32 IST
ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಆರೋಗ್ಯ ಅಧಿಕಾರಿ ಸಿಬ್ಬಂದಿಯು ಪ್ರತಿಜ್ಞಾ ವಿಧಿ ಸ್ವೀಕರಿಸಿದರು
ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಆರೋಗ್ಯ ಅಧಿಕಾರಿ ಸಿಬ್ಬಂದಿಯು ಪ್ರತಿಜ್ಞಾ ವಿಧಿ ಸ್ವೀಕರಿಸಿದರು   

ಸಂಡೂರು: ‘ಸಮಾಜದಲ್ಲಿನ ಎಲ್ಲ ಮಕ್ಕಳು ಸಂವಿಧಾನದ ಆಶಯದಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಪಾಲಕರು ತಮ್ಮ ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲೆ ಕೆಲಸಕ್ಕೆ ದೂಡುವುದು ಸರಿಯಲ್ಲ. ಈ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ’ ಎಂದು ತೋರಣಗಲ್ಲು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋಪಾಲ ರಾವ್ ಹೇಳಿದರು.

ತಾಲ್ಲೂಕಿನ ತೋರಣಗಲ್ಲು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

‘ಮಕ್ಕಳು ಕೈಗಾರಿಕೆ, ಗ್ಯಾರೇಜ್, ಹೋಟೆಲ್, ಗಣಿಗಳು ಸೇರಿದಂತೆ ಇತರೆ ಸ್ಥಳಗಳಲ್ಲಿ ಕೆಲಸ ಮಾಡುವುದು ಕಾನೂನು ಬಾಹಿರವಾಗಿದ್ದು, ಅಧಿಕಾರಿಗಳು ಅಂತಹ ಮಕ್ಕಳನ್ನು ರಕ್ಷಣೆ ಮಾಡಿ ಶಾಲೆಗಳಿಗೆ ದಾಖಲಿಸಿ ಉತ್ತಮ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು’ ಎಂದರು.

ADVERTISEMENT

ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.