ADVERTISEMENT

ಸಂಡೂರು | 'ಬಾಲ್ಯ ವಿವಾಹ ತಡೆ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕ'

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 7:39 IST
Last Updated 2 ಆಗಸ್ಟ್ 2025, 7:39 IST
ಸಂಡೂರು ತಾಲ್ಲೂಕಿನ ಚೋರುನೂರು ಗ್ರಾಮದಲ್ಲಿ ಗುರುವಾರ ನಡೆದ ಬಾಲ್ಯ ವಿವಾಹ ತಡೆ ಕಾರ್ಯಕ್ರಮವನ್ನು ಗಣ್ಯರು ಚಾಲನೆ ನೀಡಿದರು   
ಸಂಡೂರು ತಾಲ್ಲೂಕಿನ ಚೋರುನೂರು ಗ್ರಾಮದಲ್ಲಿ ಗುರುವಾರ ನಡೆದ ಬಾಲ್ಯ ವಿವಾಹ ತಡೆ ಕಾರ್ಯಕ್ರಮವನ್ನು ಗಣ್ಯರು ಚಾಲನೆ ನೀಡಿದರು      

ಸಂಡೂರು : ‘ಬಳ್ಳಾರಿ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳು ಕಂಡು ಬರುತ್ತಿದ್ದು, ಅವುಗಳ ನಿಯಂತ್ರಣಕ್ಕಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವುದು ಬಹಳ ಅವಶ್ಯಕವಾಗಿದೆ’ ಎಂದು ಸಂಡೂರು ತಾಲ್ಲೂಕಿನ ಶಾಲಾ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಜಕಣಚಾರಿ ಹೇಳಿದರು.

ತಾಲ್ಲೂಕಿನ ಚೋರುನೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ, ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ತಡೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಬಾಲ್ಯ ವಿವಾಹ, ಬಾಲ ಕಾರ್ಮಿಕತನ, ಮಕ್ಕಳ ಹಕ್ಕುಗಳ ಬಗ್ಗೆ ಸಮಗ್ರವಾಗಿ ಅರಿತುಕೊಳ್ಳಲು ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಶಿಕ್ಷಣ ಜೊತೆಗೆ ಅರಿವು ಮೂಡಿಸುವ ಸರ್ಕಾರಿ ಕಾರ್ಯಕ್ರಗಳು ಸಹ ಅವಶ್ಯಕವಾಗಿದೆ’ಎಂದರು.

ADVERTISEMENT

ಚೋರುನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಕ್ಷಯ್, ಶಿಕ್ಷಣ ಸಂಯೋಜಕ ಪಾಲಾಕ್ಷಪ್ಪ, ಪದವಿ ಪೂರ್ವ ಕಾಲೇಜು ನ ಪ್ರಚಾರ್ಯ ಬಸವರಾಜ್, ಎಸ್‍ಡಿಎಂಸಿ ಅಧ್ಯಕ್ಷ ಕರಿಬಸಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಆನಂದಪ್ಪ, ಹೊನ್ನುರಪ್ಪ, ಚನ್ನಬಸಪ್ಪ, ಮಂಜುನಾಥ, ರಮೇಶ್, ಶಾರದಾ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.