ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಪೌಷ್ಟಿಕ ಮಕ್ಕಳ ಪುನಶ್ಚೇತನ ಘಟಕ, ಕಾಂಗೋ ಮದರ್ ಕೇರ್ ಹಾಗೂ ಮಕ್ಕಳ ತುರ್ತು ನಿಗಾ ಘಟಕ, ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕ ಹಾಗೂ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೂ ಭೇಟಿ ನೀಡಿದರು.
ನವಜಾತ ಶಿಶುಗಳಿಗೆ ಹಾಗೂ ತಾಯಂದಿರುಗಳಿಗೆ ಯಾವುದೇ ನ್ಯೂನತೆ ಉಂಟಾಗದಂತೆ ನಿಗಾ ವಹಿಸಬೇಕು ಎಂದು ವಿಭಾಗದ ಮುಖ್ಯಸ್ಥರು, ಸಿಬ್ಬಂದಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯ ಅಪೌಷ್ಟಿಕ ಪುನಶ್ಚೇತನ ಘಟಕದಲ್ಲಿ ಹೊರ ಜಿಲ್ಲೆಯ ಮಕ್ಕಳೇ ದಾಖಲಾಗಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗುತ್ತಿದೆ. ಆದರೆ ಬಳ್ಳಾರಿ ಜಿಲ್ಲೆಯಲ್ಲೂ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆ ಹೆಚ್ಚಿದೆ. ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದರು.
ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಶಂಕಿತ ಡೆಂಗಿಯಿಂದಾಗಿ ಆಸ್ಪತ್ರೆಗೆ ಸೇರಿರುವ ಮಕ್ಕಳ ಮಾಹಿತಿ ಪಡೆದರು. ಬಳಿಕ ಸ್ಕ್ಯಾನಿಂಗ್ ಸೆಂಟರ್‌ಗಳಿಗೂ ಭೇಟಿ ನೀಡಿ, ನಿಯಮ ಪಾಲಿಸದ ಎರಡು ಸೆಂಟರ್‌ಗಳಿಗೆ ನೋಟಿಸ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.