
ಪ್ರಜಾವಾಣಿ ವಾರ್ತೆ
ಬಳ್ಳಾರಿ: ಜನವರಿ 1ರಂದು ಬಳ್ಳಾರಿ ನಗರದ ಅವ್ವಂಬಾವಿಯಲ್ಲಿ ನಡೆದ ಘರ್ಷಣೆ ಮತ್ತು ಕೊಲೆಗೆ ಸಂಬಂಧಿಸಿದ ವಿಡಿಯೊ ತುಣುಕು ಮತ್ತು ಫೋಟೊಗಳಿದ್ದರೆ ಹಂಚಿಕೊಳ್ಳುವಂತೆ ಅಪರಾಧ ತನಿಖಾ ದಳ (ಸಿಐಡಿ) ಸಾರ್ವಜನಿಕರು ಮತ್ತು ಮಾಧ್ಯಮಗಳಲ್ಲಿ ಮನವಿ ಮಾಡಿದೆ.
ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಐಡಿ, ‘ಘರ್ಷಣೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ತನಿಖೆಗೆ ಅನೂಕೂಲವಾಗುವ ದೃಷ್ಟಿಯಿಂದ ಜನರು ತಮ್ಮ ಬಳಿ ಇರಬಹುದಾದ ಘಟನೆಗೆ ಸಂಬಂಧಿಸಿದ ವಿಡಿಯೊ ತುಣುಕುಗಳು ಹಾಗೂ ಫೋಟೋಗಳನ್ನು ಹಂಚಿಕೊಳ್ಳಬಹುದು. ಮೊಬೈಲ್ ನಂ: 6360573808ಗೆ ವಾಟ್ಸ್‌ಆ್ಯಪ್ ಮಾಡಬಹುದು ಎಂದು ತಿಳಿಸಲಾಗಿದೆ.
ಸಾಕ್ಷಿ ಒದಗಿಸಿದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸಿಐಡಿ ತಿಳಿಸಿದೆ.