
ಹೊಸಪೇಟೆ (ವಿಜಯನಗರ): ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ‘ಸ್ವಚ್ಚ ಶನಿವಾರ, ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ’ ಅಭಿಯಾನ ನಡೆಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವಪ್ರಭು ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಹಳೆಯ ಬಾವಿಗಳ ಹತ್ತಿರ, ಸಾರ್ವಜನಿಕ ಸ್ಥಳ, ರಸ್ತೆ ಅಕ್ಕಪಕ್ಕ, ಅಂಗನವಾಡಿ ಮತ್ತು ಶಾಲಾ ಆವರಣ ಸ್ವಚ್ಛಗೊಳಿಸಿದರು. ಶಾಲಾ ಮಕ್ಕಳಿಂದ ಸ್ವಚ್ಛತೆ ಕುರಿತು ಜಾಗೃತಿ ಜಾಥಾ ನಡೆಯಿತು. ಅನಂತರ ಶಾಲಾ ಮಕ್ಕಳು ನೃತ್ಯದ ಮೂಲಕ ಸ್ವಚ್ಛತೆಯ ಅರಿವು ಮೂಡಿಸಿದರು. ನೃತ್ಯ ಮಾಡಿದ ಮಕ್ಕಳಿಗೆ ನೆನಪಿಗೆ ಕಾಣಿಕೆಯಾಗಿ ಪುಸ್ತಕಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿ ತಾರಾನಗರ, ಯೋಜನಾ ನಿರ್ದೇಶಕ ಅಶೋಕ ತೋಟದ್, ಸಹಾಯಕ ಯೋಜನಾ ಅಧಿಕಾರಿ ಉಮೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಕೆ.ವಿ., ಪಂಚಾಯತಿ ಉಪಾಧ್ಯಕ್ಷೆ ಭಾರತಿ ಪಾಟೀಲ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಪ್ರಭುದೇವ್, ಕಾರ್ಯದರ್ಶಿ ಕನಕಪ್ಪ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.