
ಪ್ರಜಾವಾಣಿ ವಾರ್ತೆ
ಸಿರುಗುಪ್ಪ: ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ದಿನದ ಮಾರುಕಟ್ಟೆ ಮುಂಭಾಗದ ಹೂವು ಮತ್ತು ಹಣ್ಣಿನ ಅಂಗಡಿಗಳು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಪೊಲೀಸರಿಂದ ತೆರವು ಕಾರ್ಯಾಚರಣೆ ನಡೆಯಿತು.
ಹಲವು ಬಾರಿ ವಾಹನಗಳನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ವ್ಯಾಪಾರ ನಡೆಸುತ್ತಿದ್ದರು. ಪಾದಚಾರಿ ರಸ್ತೆಗಳಲ್ಲಿದ್ದ ವಾಹನಗಳನ್ನು ತೆರವು ಮಾಡಲಾಯಿತು. ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡಬಾರದೆಂದು ಪೊಲೀಸರು ಖಡಕ್ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.