ಪ್ರಜವಾಣಿ ವಾರ್ತೆ
ಬಳ್ಳಾರಿ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳ ತೆರವುಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ–ವಿಮ್ಸ್) ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.
ಮಾಜಿ ಶಾಸಕ ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಮುಖಂಡರು ಭಾಗವಹಿಸಿದ್ದರು.
ಸೋಮಶೇಖರ ರೆಡ್ಡಿ ಮಾತನಾಡಿ, ‘ಜನೌಷಧ ಕೇಂದ್ರಗಳನ್ನು ಮುಚ್ಚುವ ಹುನ್ನಾರ ದೊಡ್ಡ ಅಪರಾಧ. ಈ ಔಷಧಾಲಯಗಳಿಂದ ಬಡವರಿಗೆ ಅನುಕೂಲವಾಗುತ್ತಿತ್ತು. ನರೇಂದ್ರ ಮೋದಿ ಅವರ ಫೋಟೊ ಇರುವ ಕಾರಣಕ್ಕೆ ಇದನ್ನು ಮುಚ್ಚಲಾಗುತ್ತಿದೆ. ಬಡವರ ವೋಟು ಬಿಜೆಪಿಗೆ ಹೋಗುವ ಭಯದಿಂದ, ಮೆಡಿಕಲ್ ಮಾಫಿಯಾಗಳ ಕಾರಣದಿಂದ ಇದನ್ನು ಮುಚ್ಚಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ದಯವಿಟ್ಟು ಜನರ ಹೊಟ್ಟೆ ಮೇಲೆ ಹೊಡೆಯಬೇಡಿ. ಅವರಿಗೆ ಆರ್ಥಿಕ ಹೊರೆಯಾಗುವಂತೆ ಮಾಡಬೇಡಿ’ ಎಂದು ಮನವಿ ಮಾಡಿದರು.
ಬಿಜೆಪಿ ಮುಖಂಡ ರಾಮಲಿಂಗಪ್ಪ, ಹನುಮಂತಪ್ಪ, ಕಾರ್ಪೊರೇಟರ್‌ಗಳು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.