ADVERTISEMENT

ಸರ್ಕಾರಿ ಶಾಲೆಗೆ ಉಳಿತಾಯದ ಹಣ: ರಾಜಮ್ಮ ಸೇವೆಗೆ ಮುಖ್ಯಮಂತ್ರಿ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 4:00 IST
Last Updated 11 ಆಗಸ್ಟ್ 2025, 4:00 IST
ಪಿ. ರಾಜಮ್ಮ 
ಪಿ. ರಾಜಮ್ಮ    

ಕಂಪ್ಲಿ: ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮದ ಲಿಂಗತ್ವ ಅಲ್ಪಸಂಖ್ಯಾತರಾದ ಪಿ. ರಾಜಮ್ಮ ಅವರು ತಮ್ಮ ದುಡಿಮೆಯಲ್ಲಿ ಉಳಿದ ಹಣವನ್ನು ಸರ್ಕಾರಿ ಶಾಲೆಯ ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನಾ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶಾರದಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 150ವಿದ್ಯಾರ್ಥಿಗಳಿಗೆ ರಾಜಮ್ಮ ಅವರು ₹60,000 ಮೊತ್ತದ ಟೀ ಶರ್ಟ್ ಮತ್ತು ಪ್ಯಾಂಟ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಳೆದ ಸಾಲಿನಲ್ಲಿ 31 ವಿದ್ಯಾರ್ಥಿಗಳಿಗೆ ₹20,000 ಮೊತ್ತದ ಸಮವಸ್ತ್ರ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT