ADVERTISEMENT

ಸಂಡೂರು: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸಿಒ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 6:08 IST
Last Updated 11 ಜುಲೈ 2025, 6:08 IST
ಸಂಡೂರಿನ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೈರ್ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು
ಸಂಡೂರಿನ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೈರ್ ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು   

ಸಂಡೂರು: ಪಟ್ಟಣದ 100 ಹಾಸಿಗೆಗಳ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೈರ್ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.

ಆಸ್ಪತ್ರೆಯ ರೇಡಿಯಾಲಜಿಸ್ಟ್ ಕೊಠಡಿ, ಒಪಿಡಿ ಸೇರಿದಂತೆ ಮಕ್ಕಳ, ಮಹಿಳಾ ವಾರ್ಡ್‍ಗಳಿಗೆ ತೆರಳಿ ಪರಿಶೀಲಿಸಿದರು. ಆಸ್ಪತ್ರೆಗೆ ಆಗಮಿಸಿದ ಒಳ, ಹೊರ ರೋಗಿಗಳ ಬಳಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಯ ಬಗ್ಗೆ ಕೆಲ ಕಾಲ ಚರ್ಚೆ ಮಾಡಿದರು.

ಬಳಿಕ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿನ ವೈದ್ಯರು, ಅಧಿಕಾರಿ, ಸಿಬ್ಬಂದಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಕಾಲಕ್ಕೆ ಉತ್ತಮ ಚಿಕಿತ್ಸೆ ನೀಡಬೇಕು. ವೈದ್ಯೆ ಡಾ.ಬಿ.ಜ್ಯೋತಿ ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ನನಗೇ ಸರಿಯಾಗಿ ಸ್ಪಂದಿಸುತ್ತಿಲ್ಲ ಇನ್ನು ಸಾಮಾನ್ಯ ಜನರ ಗತಿ ಏನು?’ ಎಂದು ಪ್ರಶ್ನಿಸಿದ ಅವರು, ನಡತೆ ತಿದ್ದಿಕೊಳ್ಳುವಂತೆ ತಿಳಿಸಲು ಆಡಳಿತ ವೈದ್ಯಾಧಿಕಾರಿ ಡಾ.ಪವನ್‍ಕುಮಾರ್ ಅವರಿಗೆ ಸೂಚಿಸಿದರು.

ADVERTISEMENT

‘ಆಯುಷ್ ವೈದ್ಯಾಧಿಕಾರಿಗಳ ಮೇಲೆ ಅತಿ ಅವಲಂಬನೆ ಸರಿಯಲ್ಲ. ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಬೇಕು’ ಎಂದರು.

ಬಿಇಒ ಐ.ಆರ್.ಅಕ್ಕಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರೇಣುಕಾಚಾರ್ಯಸ್ವಾಮಿ, ವೈದ್ಯಾಧಿಕಾರಿಗಳಾದ ಡಾ.ಕಿರಣ್, ಡಾ.ಚಂದ್ರಪ್ಪ, ಡಾ.ಬಾನು, ಡಾ.ವಿಶಾಂತ್, ಅಧಿಕಾರಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.